ಬಿಪಿಎಲ್ ಕಾರ್ಡ್ ಅರ್ಜಿ ಆರೋಗ್ಯ ಸಮಸ್ಯೆಯುಳ್ಳವರಿಗೆ ಮಾತ್ರ ಕಾರ್ಡ್
ನಮಸ್ಕಾರ ಸ್ನೇಹಿತರೇ ನಿಮಗೆ publicschemes.com ವೆಬ್ಸೈಟ್ಗೆ ಸ್ವಾಗತ, ತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಅನ್ನು ಎರಡು ವರ್ಷಗಳಿಂದಲೂ ಪುನರಾರಂಭಿಸಿಲ್ಲ. ಹೊಸ ಅರ್ಜಿಗೂ ಇನ್ನು ಅವಕಾಶ ಇಲ್ಲ! ರಾಜ್ಯಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸುಮಾರು 2.94 ಲಕ್ಷ ಮಂದಿ ಕಾರ್ಡ್‌ಗಾಗಿ ಕಾಯುತ್ತಿದ್ದಾರೆ. ಆದರೆ ಹೊಸ ಅರ್ಜಿದಾರರರಿಗೆ ಅವಕಾಶವಿಲ್ಲಎನ್ನುತ್ತಿದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಸ್ಥಗಿತಗೊಳಿಸಿದ್ದ ಪೋರ್ಟಲ್ ಅನ್ನು ಈವರೆಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮುಕ್ತಗೊಳಿಸಿಲ್ಲ. ಆದರೆ, ಆರೋಗ್ಯ ತುರ್ತು ಇರುವವರಿಗೆ ಹಾಗೂ ಕಾರ್ಮಿಕರಿಗೆ ಮಾತ್ರ ವೆಬ್‌ಸೈಟ್ ತೆರೆದುಕೊಳ್ಳುತ್ತದೆ. ಹೀಗೆ ಬಂದ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರ ಶಿಫಾರಸಿನ ಮೇರೆಗೆ ಆಹಾರ ಇಲಾಖೆಯ ಆಯುಕ್ತರು ಅನುಮೋದನೆ ನೀಡಲಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿಗಳ ಲಾಭ ಪಡೆಯಲು ಸಾಕಷ್ಟು ಮಂದಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆಯಲು ಮುಂದಾಗುತ್ತಾರೆ ಎಂಬ ಕಾರಣದಿಂದ ಆನ್ ಲೈನ್ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗಳನ್ನು
ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಸದ್ಯ ಈ ಹಿಂದೆ ಅರ್ಜಿ ಸಲ್ಲಿಸಲು ಯಾವ ನಿದುಮಗಳು ಜಾರಿಯಲ್ಲಿದ್ದವೋ ಅದೇ ನಿದುಮಗಳನ್ನು ಅನುಸರಿಸಲಾಗುವುದು. ಒಂದು ವೇಳೆ ಹೊಸದಾಗಿ ಮಾರ್ಗಸೂಚಿ ಬಂದರೆ, ಸರಕಾರದ ಸೂಚನೆ ಮೇರೆಗೆ ಅವುಗಳನ್ನು ಅಳವಡಿಸಲಾಗುವುದು ಎಂಬುದು ರಾಜ್ಯ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಅಭಿಮತ.
2.94 ಲಕ್ಷ ಅರ್ಜಿದಾರರಿಗೆ ಕಾರ್ಡ್
ಬರಬೇಕು: ಚುನಾವಣೆ ನೀತಿ ಸಂಹಿತೆಗೂ ಮೊದಲು, ಅಂದರೆ 2022-23ರಲ್ಲಿ ಬಿಪಿಎಲ್ ಕಾರ್ಡ್‌ಗಾಗಿ 2.94 ಲಕ್ಷ ಅರ್ಜಿಗಳು ಬಂದಿವೆ. ಇವುಗಳ ಪರಿಶೀಲನೆ ನಡೆಯುತ್ತಿದೆ. ಕಾರು, ಸ್ವಂತ ಮನೆ, ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಅರ್ಹರಿಗೆ ಕಾರ್ಡ್ ಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಸದ್ಯ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ಗಳೂ ಸೇರಿ 1.28 ಕೋಟಿ ಕಾರ್ಡ್ಗಳಿವೆ. 4.42 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ.
ಹೊಸ ಕಾರ್ಡ್ ಇಲ್ಲ :
ಸದ್ಯ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡುವುದಿಲ್ಲ. ಆದರೆ, ಆರೋಗ್ಯ ಸಮಸ್ಯೆಯುಳ್ಳವರಿಗೆ ಮಾತ್ರ ಅಗತ್ಯತೆ ಪರಿಶೀಲಿಸಿ ಕಾರ್ಡ್‌ಗಳನ್ನು ನೀಡಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.