ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ:
ಕಚ್ಛಾ ಮಾಲು ಖರೀದಿ, ಚರ್ಮೋತ್ಪನ್ನಗಳ ಉತ್ಪಾದನೆ, ರಿಪೇರಿ ಮತ್ತು ಮಾರಾಟ ಮಾಡುವ ಅಂಗಡಿ ತೆರೆಯುವುದು/ಲಘು ವಾಹನದ ಮೂಲಕ ವ್ಯಾಪಾರ ಮಾಡುವವರಿಗೆ ಇತ್ಯಾದಿ. ಘಟಕದ ವೆಚ್ಚ . 1,00,000/- to 50,000/-
ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಞಾನ, ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ.
ಚರ್ಮಕಾರರ ವಸತಿ ಯೋಜನೆ:
ಮೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಯೋಜನೆಯ ಜಾರಿ
ಚರ್ಮ ಕುಶಲಕರ್ಮಿಗಳು ಖಾಲಿ ನಿವೇಶನ ಹೊಂದಿದ್ದಲ್ಲಿ ಚರ್ಮಕಾರರಿಗೆ ವಾಸಕ್ಕೆ ಮತ್ತು ಉದ್ಯೋಗ ಮುಂದುವರೆಸಲು ಅನುಕೂಲ ವಾಗುವಂತೆ ವಸತಿ ಕಾರ್ಯಾಗಾರಗಳನ್ನು ನಿರ್ಮಿಸಿಕೊಳ್ಳಲು ನಿಗಮದ ಮೂಲಕ ರೂ.2.20 ಲಕ್ಷ ಧನಸಹಾಯ. (ಮೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಯೋಜನೆಯ ಜಾರಿ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-10-2025
ವಿಶೇಷ ಸೂಚನೆ: ನಿಗಮದ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು
ಪ್ರಕಟಣೆ:
ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
(ಕರ್ನಾಟಕ ಸರ್ಕಾರದ ಒಂದು ಉದ್ಯಮ)
ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಿಸುವುದು ಮತ್ತು ಹಿಂಸೆಯನ್ನು ತ್ಯಜಿಸುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನಬದ್ಧ ಮೂಲಭೂತ ಕರ್ತವ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು ಖ್ಯಾತ ಚಲನಚಿತ್ರ ನಟರಾದ ಶ್ರೀ ಡಾಲಿ ಧನಂಜಯ್ ರವರನ್ನು
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಪ್ರಚಾರ ರಾಯಭಾರಿಯನ್ನಾಗಿ ಅಧಿಕೃತವಾಗಿ ಘೋಷಿಸಿ, ಅಭಿನಂದಿಸಿದರು. ಮಾನ್ಯ ಸಮಾಜ ಕಲ್ಯಾಣ ಇಲಾಖಾ ಸಚಿವರು ಉಪಸ್ಥಿತರಿದ್ದರು.
ಅಗತ್ಯವಿರುವ ದಾಖಲೆಗಳು
ಅರ್ಜಿದಾರರ ಭಾವಚಿತ್ರ.
R Dಪರಿಶಿಷ್ಟ ಜಾತಿ/ಪಂಗಡದ ಪ್ರಮಾಣ ಪತ್ರ.
ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
ಪಡಿತರ ಚೀಟಿ.
ಮತದಾರರ ಚೀಟಿ.
ಆಧಾರ ಕಾರ್ಡ್ ಪತ್ರ.
ವಾಹನವಾಗಿದ್ದಲ್ಲಿ, ವಾಹನ ಚಾಲನಾ ಪರವಾನಗಿ ಪತ್ರ.
ಪಹಣಿ/ ಆರ್ಟಿಸಿ (ಗಂಗಾಕಲ್ಯಾಣ ಯೋಜನೆ).
ಸಣ್ಣ ಅತಿಸಣ್ಣ ರೈತರ ಪ್ರಮಾಣ ಪತ್ರ (ಗಂಗಾಕಲ್ಯಾಣ ಯೋಜನೆ).
ವಂಶವೃಕ್ಷ (ಗಂಗಾಕಲ್ಯಾಣ ಯೋಜನೆ).
ಭೂರಹಿತ ಕೃಷಿ ಕಾರ್ಮಿಕರ ಪ್ರಮಾಣ ಪತ್ರ.
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಅಕ್ಟೋಬರ್, 2025 ಆಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಕಲಿಸಬೇಕು. (sevasindhu.karnataka.gov.in ) ಮೂಲಕ ಆನ್‌ಲೈನ್ ಅರ್ಜಿ ಹಾಕಿ, ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ನೀವು ಸಂಪರ್ಕಿಸಬಹುದಾಗಿದೆ.
ಕೊನೆಯ ದಿನಾಂಕ ಅಕ್ಟೋಬರ್ 08, 2025 ಆಗಿದೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://sevasindhu.karnataka.gov.in/
ಹೆಚ್ಚಿನ ಮಾಹಿತಿಗಾಗಿ ನೀವು 24/7 ಸಹಾಯವಾಣಿ ಸಂಖ್ಯೆ 9482300400 ಗೆ ಸಂಪರ್ಕಿಸಿ.
