Applications invited for incentive funds for simple marriages of minority communities| ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ 2025

Applications invited for incentive funds for simple marriages of minority communities 2025-26, ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ ರೂ. 50 ಸಾವಿರ ಸಹಾಯಧನ ಅಥವಾ ಪ್ರೋತ್ಸಾಹ ಧನ ನೀಡಲಾಗುವುದು. ಅಲ್ಪಸಂಖ್ಯಾತ ಸಮುದಾಯದ ನಮ ಜೋಡಿಗಳು ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಬೇಕಾಗಿರುವಂತ ಸಂಪೂರ್ಣ ಮಾಹಿತಿ ಈ ರೀತಿ ಇದೆ.
ಸೌಲಭ್ಯದ ಪ್ರಯೋಜನ ಪಡೆಯಲು ಷರತ್ತುಗಳು:
- ಅರ್ಜಿ ಸಲ್ಲಿಸುವ ವಧು ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತ ಸಮುದಾಯದವರಾಗಿರಬೇಕು.
- ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು.
- ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18, ಗರಿಷ್ಠ 42 ವರ್ಷ ಹಾಗೂ ವರನಿಗೆ ಕನಿಷ್ಠ 21, ಗರಿಷ್ಠ 45 ವರ್ಷ ವಯಸ್ಸಿನವರಾಗಿರಬೇಕು.
- ವಧು-ವರರ ವಾರ್ಷಿಕ ಆದಾಯ ರೂ.2.50ಲಕ್ಷ ಮತ್ತು ಇಬ್ಬರ ಒಟ್ಟು ಆದಾಯ 5 ಲಕ್ಷ ಮೀರುವಂತಿಲ್ಲ.
- ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಹಾಗೂ ವಧುವಿಗೆ ಜೀವಂತ ಪತಿಯಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.