Department of Labor Scholarship 2025 ಕಾರ್ಮಿಕ ಇಲಾಖೆ ವಿದ್ಯಾರ್ಥಿ ವೇತನ

Department of Labor Scholarship 2025 ಕಾರ್ಮಿಕ ಇಲಾಖೆ ವಿದ್ಯಾರ್ಥಿ ವೇತನ
Telegram Group Join Now
WhatsApp Follow Join Now

2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು  ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಇಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ.  ಅರ್ಜಿ ಸಲ್ಲಿಸಬಹುದು ಎಂದು ಮಂಡಳಿಯ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆ:

ಮಂಡಳಿಯಲ್ಲಿ 31/05/2025 ರ ಪೂರ್ವದಲ್ಲಿ ನೊಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಪ್ರೌಢ ಶಾಲೆ ಯಿಂದ ಸ್ನಾತಕೋತ್ತರ ಪದವಿ ಹಾಗೂ ವೈಧ್ಯಕೀಯ or ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

• ಕಾರ್ಮಿಕರ ಮಾಸಿಕ ವೇತನ ರೂ 35,000. ಮೀರಿರಬಾರದು.

• ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಸಹಾಯಧನ ಸೌಲಭ್ಯವನ್ನು ನೀಡಲಾಗುತ್ತದೆ.

• ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.50 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.45 ರಷ್ಟು ಅಂಕ ಪಡೆದಿರಬೇಕು.

ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಸೂಚನೆಗಳು:

• ಅಭ್ಯರ್ಥಿಯ ತಂದೆ, ತಾಯಿ ಹಾಗೂ ಅರ್ಜಿ ಸಲ್ಲಿಸುತ್ತಿರುವ ವಿದ್ಯಾರ್ಥಿ (ಮೂರು ಜನರ)

1.ಆಧಾರ್ ಕಾರ್ಡ್,
2.ಪಾಸ್‌ಬುಕ್ ಜೆರಾಕ್ಸ್ ಪ್ರತಿ ಲಗತ್ತಿಸುವಾಗ Account Number ಮತ್ತು IFSC Code, ಪದವಿ, ಸ್ನಾತಕೋತ್ತರ ಮತ್ತು ಇಂಜೀನಿಯರಿಂಗ್ & ಮೆಡಿಕಲ್ ವಿದ್ಯಾರ್ಥಿಗಳ ಅಂಕಪಟ್ಟಿ ವಿವರ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕಪಟ್ಟಿಯಲ್ಲಿನ ವಿವರಗಳು ಸ್ಪಷ್ಟವಾಗಿ ಇರಬೇಕು ಜೊತೆಗೆ ಹಿಂದಿನ ಎರಡು ಸೆಮಿಸ್ಟರ್‌ಗಳ ಅಂಕಪಟ್ಟಿಯನ್ನು ಕಡ್ಡಾಯವಾಗಿ ಅಪ್ಲೋಡ್‌ ಮಾಡಬೇಕು. ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

• ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ, ಅವರ ಮರಣ ಪ್ರಮಾಣ ಪತ್ರ ಅಪ್ಲೋಡ್‌ ಮಾಡಬೇಕು. ತಪ್ಪಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:
ಅರ್ಜಿಗಳನ್ನು **ಆನ್‌ಲೈನ್‌ನಲ್ಲಿ ಮಾತ್ರ** SSP (ರಾಜ್ಯ ವಿದ್ಯಾರ್ಥಿವೇತನ ಜಾಲತಾಣ) ಮೂಲಕ ಸ್ವೀಕರಿಸಲಾಗುವುದು.

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31/10/2025

ಮುಖ್ಯ ಲಿಂಕ್‌ಗಳು: ಅರ್ಜಿ ಜಾಲತಾಣ:[https://ssp.karnataka.gov.in/](https://ssp.karnataka.gov.in/)

ಹೆಚ್ಚಿನ ಮಾಹಿತಿಗಾಗಿ:

ಕಾರ್ಮಿಕ ಸಹಾಯವಾಣಿ: 155214 ಅನ್ನು ಸಂಪರ್ಕಿಸಿ.


ಮುಖ್ಯಕಾರ್ಯನಿರ್ವಹಣಾಧಿಕಾರಿಗಳು
ಮತ್ತು ಕಾರ್ಯದರ್ಶಿಗಳು
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

About The Author

You may have missed